ಸೇತುವೆ ಮೇಲಿಂದ ಕಂದಕಕ್ಕೆ ಬಿದ್ದ ಬಸ್.. ನಾಲ್ವರು ಸಾವು, 30 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಅಮರಾವತಿಯ ಪರತ್ವಾಡಿ ಧಾನಿ ಮಾರ್ಗದ ಸೇಮದೋಹ್ ಬಳಿ ಖಾಸಗಿ ಬಸ್ ಬೆಳಗ್ಗೆ ಮೆಲ್ಘಾಟ್‌ನ ಅಂಕುಡೊಂಕಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ.

ಜಿಲ್ಲಾಧಿಕಾರಿ ಸೌರಭ್ ಕಟಿಯಾರ್ ಅವರ ಮಾಹಿತಿ ಪ್ರಕಾರ, ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದಾರೆ ಮತ್ತು ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ತೀವ್ರವಾಗಿ ಗಾಯಗೊಂಡ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಸೆಮಡೋಹ್‌ನ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!