ಎರಡೇ ಆಪ್ಷನ್.. ಟ್ರಾಫಿಕ್ ರೂಲ್ಸ್ ಫಾಲೋ ಮಾಡ್ತೀರಾ, ಲೈಸೆನ್ಸ್ ಕಳ್ಕೋತೀರಾ?: ಸಿದ್ದು ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ನೂತನ 65 ಆಂಬ್ಯುಲೆನ್ಸ್‌ ಗಳನ್ನು ಲೋಕಾರ್ಪಣೆ ಮಾಡಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ’ ಎಂದರು. ಈ ಸಮಯದಲ್ಲಿ ನಾವು ಅಗತ್ಯವಾದ ತುರ್ತು ಚಿಕಿತ್ಸೆಯನ್ನು ಪಡೆದರೆ, ಅದು ನೂರಾರು ಜೀವಗಳನ್ನು ಉಳಿಸಬಹುದು. ಈ ಆಂಬ್ಯುಲೆನ್ಸ್‌ಗಳು ಜೀವ ಉಳಿಸಲು ನೆರವಾಗುತ್ತವೆ ಎಂದರು.

ಪ್ರಸ್ತುತ 65 ಆಧುನಿಕ ಮತ್ತು ಸರಳ ಆಂಬ್ಯುಲೆನ್ಸ್‌ಗಳು ಬಳಕೆಯಲ್ಲಿವೆ. ಈ ಆಂಬ್ಯುಲೆನ್ಸ್‌ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅಭಿವೃದ್ಧಿಪಡಿಸಲಾಗುವುದು ಎಂದರು.

ಆದರೆ, ಸಂಚಾರಿ ನಿಯಮಗಳನ್ನು ಶಿಸ್ತುಬದ್ಧವಾಗಿ ಪಾಲಿಸಿದರೆ ಹೆಚ್ಚಿನ ಅಪಘಾತಗಳು ಸಂಭವಿಸುವುದಿಲ್ಲ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದನ್ನು ತಪ್ಪಿಸಿ. ದಯವಿಟ್ಟು ಕುಟುಂಬಗಳನ್ನು ಅನಾಥರನ್ನಾಗಿ ಮಾಡಬೇಡಿ ಎಂದು ಸಿಎಂ ಮನವಿ ಮಾಡಿದರು.

ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!