January18, 2026
Sunday, January 18, 2026
spot_img

CL-7 ಲೈಸೆನ್ಸ್ ಲಂಚ ಕೇಸ್: ಅಬಕಾರಿ DC, SP ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೋಟೆಲ್ ಮತ್ತು ವಸತಿ ಗೃಹಗಳಿಗೆ ಅಬಕಾರಿ ಇಲಾಖೆಯಿಂದ ನೀಡಲಾಗುವ ಮದ್ಯ ಪರವಾನಗಿ ನೀಡುವ CL-7 ಲೈಸೆನ್ಸ್ ಮಾಡಿಸಿಕೊಡುವುದಕ್ಕೆ ಲಂಚ ಬೇಡಿಕೆ ಇಟ್ಟ ಆರೋಪದಡಿ ಬೆಂಗಳೂರಿನ ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಮೂವರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸಿದ ತನಿಖೆಯ ಬಳಿಕ ಕೋರ್ಟ್ ಈ ಆದೇಶ ನೀಡಿದೆ.

ಲೈಸೆನ್ಸ್ ನೀಡುವ ಪ್ರಕ್ರಿಯೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನೂ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ತನಿಖೆಯ ವೇಳೆ ಆರೋಪಿಗಳನ್ನು ತಡರಾತ್ರಿ ವರೆಗೆ ವಿಚಾರಣೆ ನಡೆಸಿದ ಅಧಿಕಾರಿಗಳು, ಲಂಚ ವಸೂಲಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಎಲ್ಲಾ ದಾಖಲೆಗಳೊಂದಿಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸುವಂತೆ ಆದೇಶಿಸಿದ್ದಾರೆ.

Must Read

error: Content is protected !!