ಇಸ್ರೇಲ್ ಭೀಕರ ವಾಯುದಾಳಿ: ಲೆಬನಾನ್ ಬಿಟ್ಟು ಹೊರಡಿ ಎಂದ ಬೆಂಜಮಿನ್ ನೆತನ್ಯಾಹು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೆಬನಾನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಜ್ಬುಲ್ಲಾ ವಿರುದ್ಧ ಇಸ್ರೇಲ್ ಯುದ್ಧ ಪ್ರಾರಂಭಿಸಿದೆ. 18 ವರ್ಷಗಳಲ್ಲೇ ಅತ್ಯಂತ ಭೀಕರ ದಾಳಿ ನಡೆಸುತ್ತಿರುವ ಇಸ್ರೇಲ್ ಲೆಬನಾನ್ ಮೇಲೆ 1600 ದಾಳಿಗಳನ್ನು ನಡೆಸಿದ್ದು ದಾಳಿಯಲ್ಲಿ ಸುಮಾರು 500 ಜನರು ಸಾವನ್ನಪ್ಪಿದ್ದಾರೆ.

ಏತನ್ಮಧ್ಯೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೆಬನಾನ್ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ನೀವು ಸುರಕ್ಷಿತ ಸ್ಥಳಗಳಿಗೆ ಹೋಗಿ, ಲೆಬನಾನ್ ಜನರೊಂದಿಗೆ ನಮಗೆ ಯಾವುದೇ ದ್ವೇಷವಿಲ್ಲ. ಆದರೆ ಹೆಜ್ಬುಲ್ಲಾವನ್ನು ಬಿಟ್ಟು ಬಿಡುವ ಪ್ರಶ್ನೆಯೇ ಇಲ್ಲ ಎಂದು ನೆತನ್ಯಾಹು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಇಸ್ರೇಲ್‌ನ ಈ ದಾಳಿಗಳಿಂದಾಗಿ ಇಡೀ ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅಮೆರಿಕ ತನ್ನ ಇನ್ನೂ ಕೆಲವು ಯೋಧರನ್ನು ಕಳುಹಿಸುವುದಾಗಿ ಘೋಷಿಸಿದ್ದರೆ, ಇರಾನ್ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದೆ.

ಇಸ್ರೇಲ್ ವಾಯು ದಾಳಿ ಹಿನ್ನೆಲೆಯಲ್ಲಿ ಸಾವಿರಾರು ಲೆಬನಾನ್ ನಾಗರಿಕರೂ ದಕ್ಷಿಣದ ಕಡೆಗೆ ಹೋಗುತ್ತಿದ್ದಾರೆ. ಹೀಗಾಗಿ ದಕ್ಷಿಣದ ಬಂದರು ನಗರವಾದ ಸಿಡಾನ್‌ನ ಮುಖ್ಯ ಹೆದ್ದಾರಿಯು ರಾಜಧಾನಿ ಬೈರುತ್‌ಗೆ ಹೋಗುವ ಕಾರುಗಳಿಂದ ಜಾಮ್ ಆಗಿದೆ. ಇದು 2006 ಬಳಿಕ ನಡೆಯುತ್ತಿರುವ ಅತಿದೊಡ್ಡ ನಿರ್ಗಮನವಾಗಿದೆ. ಈ ದಾಳಿಯಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರು ಸೇರಿದಂತೆ 492 ಜನರು ಸಾವನ್ನಪ್ಪಿದ್ದು 1,645 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.

ಕ್ರೂಸ್ ಕ್ಷಿಪಣಿಗಳು, ದೀರ್ಘ ಮತ್ತು ಅಲ್ಪ-ಶ್ರೇಣಿಯ ರಾಕೆಟ್‌ಗಳು ಮತ್ತು ದಾಳಿಯ ಡ್ರೋನ್‌ಗಳನ್ನು ಬಳಸಿ 1,600 ಹೆಜ್ಬೊಲ್ಲಾ ಗುರಿಗಳನ್ನು ಹೊಡೆದುರುಳಿಸಿದ್ದೇವೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!