62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ, ಮದ್ಯ ವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಇದರಂತೆ ಮಂಗಳವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು, ಪೊಲೀಸರು 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಹಲವು ಲೋಪದೋಷಗಳ ಕಂಡು ಬಂದಿದ್ದು, ತನಿಖೆಗೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.

ದಾಳಿ ವೇಳೆ ದಾಖಲೆ ಇಲ್ಲದೆ 2 ಲಕ್ಷ ಹಣ, ಗಾಂಜಾ ಮತ್ತು ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದ್ದಾರೆಂದು ವರದಿಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!