ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.


