November 11, 2026
Wednesday, November 11, 2026
spot_img

ಸ್ಪೇನ್‌ನಲ್ಲಿ 2 ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ: 21 ಮಂದಿ ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ಪೇನ್‌ನ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ ರೈಲು ಕೂಡ ಹಳಿತಪ್ಪಿತು ಎಂದು ಸ್ಪೇನ್‌ನ ಅಡಿಫ್ ರೈಲು ಜಾಲ ನಿರ್ವಾಹಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ದುರಂತದಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಆಂಡಲೂಸಿಯಾದ ಉನ್ನತ ತುರ್ತು ಅಧಿಕಾರಿ ಆಂಟೋನಿಯೊ ಸ್ಯಾನ್ಜ್ ಪತ್ರಿಕಾಗೋಷ್ಠಿ ನಡೆಸಿ, ಕನಿಷ್ಠ 73 ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ ಎಂದು ವಿವರಿಸಿದ್ದಾರೆ.

Must Read