ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋರ್ಟ್ ಆದೇಶ ಬಂದ ಮೇಲೆ ಸಿಎಂ ಸೈಟ್ ವಾಪಸ್ ಮಾಡಿದ್ದಾರೆ. ಭಯದಿಂದ ಮುಡಾ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ನೈತಿಕತೆ ಇದ್ಯಾ ಅಂತಾ ಕಾಂಗ್ರೆಸ್ ನನ್ನನ್ನು ಕೇಳಿದೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧರಾ? ಸಿದ್ದರಾಮಯ್ಯರ ಹಿಂದೆ ಬಂಡೆ ರೀತಿ ಇದ್ದೇವೆ ಅಂತಾ ಹೇಳುತ್ತಿದ್ದರು. ಪ್ರಾಣಕ್ಕೆ ಪ್ರಾಣ ಕೊಡಲೂ ಸಿದ್ಧ ಎನ್ನುತ್ತಾರೆ. ಈಗ ಸಿದ್ದರಾಮಯ್ಯ ರಾಜೀನಾಮೆ ಕೊಡಿ. ನೀವೇ ಸವಾಲು ಹಾಕಿದ್ದೀರಾ, ನಾನು ರಾಜಕೀಯವನ್ನು ವೈಯಕ್ತಿಕವಾಗಿ ಟೀಕಿಸುವುದಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದು ತಪ್ಪು ಎಂದು ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.