ಮನೆಯಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟ.. ಆರು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಆರು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ದಾವಣಗೆರೆ ತಾಲೂಕಿನ ತುರ್ಚಘಟ್ಟದಲ್ಲಿ ಈ ಘಟನೆ ನಡೆದಿದೆ. ಮನೆಯೊಂದರಲ್ಲಿ ನಡೆದ ಸಿಲಿಂಡರ್ ಸ್ಫೋಟದಲ್ಲಿ ವೃದ್ಧ ದಂಪತಿ, ಬಾಲಕಿ ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ಮೇಲ್ಛಾವಣಿ ಧ್ವಂಸಗೊಂಡಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!