ಹೊಸದಿಗಂತ ಹಾಸನ :
ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ, ರಾಮಸಾಗರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ರಾಮಸಾಗರ ಗ್ರಾಮದಲ್ಲಿ ಚಿರತೆ ಗ್ರಾಮದೊಳಗೆ ಎಂಟ್ರಿಕೊಟ್ಟು, ಕರು, ಕುರಿ, ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕಿತ್ತಿತ್ತು. ಹಗಲು ವೇಳೆ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿತ್ತು. ಇತ್ತೀಚಿಗೆ ಆಗಾಗ ಚಿರತೆ ರೈತರ ಜಮೀನಿನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿಸಿತ್ತು.
ಸ್ಥಳೀಯರು ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದ ಹಿನ್ನೆಲೆ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನಿಟ್ಟು ಕಾಯ್ದಿರಿಸಿದ್ದರು. ಗ್ರಾಮಸ್ಥರಿಗೆ ತಲೆನೋವಾಗಿದ್ದ ಎರಡು ವರ್ಷದ ಹೆಣ್ಣು ಚಿರತೆ ಇಂದು ಬೋನಿಗೆ ಬಿದ್ದಿದೆ.
ಚಿರತೆ ಸೆರೆಯಿಂದ ಬಿಟ್ಟ ಸ್ಥಳೀಯರು ಹಾಗೂ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.