ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್ಗಢದ ನಾರಾಯಣಪುರ ಮತ್ತು ದಾಂತೇವಾಡ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 30 ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್ ಪ್ರದೇಶದ ದಟ್ಟ ಅರಣ್ಯದಲ್ಲಿ ಕನಿಷ್ಠ 30 ನಕ್ಸಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ನಾರಾಯಣಪುರ-ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿರುವ ಅಬುಜ್ಮದ್ ಅರಣ್ಯದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ್ಯೆಯಾದ ಮಾವೋವಾದಿಗಳ ದೇಹಗಳು ಮತ್ತು ಅವರ ಬಳಿ ಎಕೆ -47 ರೈಫಲ್ ಮತ್ತು ಒಂದು ಎಸ್ಎಲ್ಆರ್ (ಸೆಲ್ಫ್-ಲೋಡಿಂಗ್ ರೈಫಲ್) ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.