ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.
ಶೇಷಾದ್ರಿ (23) ಮೃತ ಬೈಕ್ ಸವಾರ. ಶೇಷಾದ್ರಿ ರಾಜಗೋಪಾಲನಗರ ನಿವಾಸಿ. ಘಟನೆ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೀಡಾದ ಲಾರಿಯನ್ನು ಪೀಣ್ಯ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೃತರ ತಂದೆ ಚಂದ್ರಶೇಖರ್ ಪೀಣ್ಯ ಸಂಚಾರ ಪೊಲೀಸರಿಗೆ ದೂರು ನೀಡಿದ್ದಾರೆ.