ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅವರಂತಹ ಅನೇಕರು ಬಂದರೂ ನಾನು ಹೆದರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ನನ್ನನ್ನು ಕಂಡರೆ ಕುಮಾರಸ್ವಾಮಿ ಹೆದರುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರಿಗೆ ನಾನೇಕೆ ಹೆದರಬೇಕು ಎಂದು ಪ್ರಶ್ನಿಸಿದರು.
ನಾನು ಸಿದ್ದರಾಮಯ್ಯನವರ ನೆರಳಿನಲ್ಲಿ ರಾಜಕೀಯಕ್ಕೆ ಬಂದೆನಾ? ನಾನು ನನ್ನ ಕೆಲಸದಲ್ಲಿ, ನನ್ನ ಕ್ರಿಯಾಶೀಲತೆಯಲ್ಲಿ ಮುಂದುವರೆದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ದೇವೇಗೌಡರ ನೆರಳಲ್ಲಿ ಬಂದ ನಾನು ನಾಡಿನ ಜನರಿಗೆ ಮಾತ್ರ ಹೆದರುತ್ತೇನೆ ಎಂದು ಟಾಂಗ್ ನೀಡಿದ್ದಾರೆ.