ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ ಖಾಸಗಿ ಬಸ್ ಹಾಗೂ ಪ್ರಯಾಣಿಕ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖಾಸಗಿ ಬಸ್ ಇರಕಸಂದ್ರ ಕಾಲೋನಿಯಿಂದ ಕೋಳಾಲ ಕಡೆಗೆ ಹೋಗುತ್ತಿದ್ದಾಗ ಬೆಂಗಳೂರಿನಿಂದ ಅಕ್ಕಿರಾಂಪುರಕ್ಕೆ ಹೋಗುತ್ತಿದ್ದ ಕಾರು ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನೆಯಿಂದಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.