ಪಿಎಂ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 18ನೇ ಕಂತನ್ನು ಮಹಾರಾಷ್ಟ್ರದ ವಾಶಿಮ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಿದರು.

ಈ ಮಹತ್ವದ ಘಟನೆಯು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಆರ್ಥಿಕ ಪ್ರಯೋಜನಗಳನ್ನು ಒದಗಿಸಿದೆ.

ಈ ಸಂದರ್ಭ ಮಹಾರಾಷ್ಟ್ರದ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್, ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ರಾಜೀವ್ ರಂಜನ್ ಸಿಂಗ್, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!