ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹಗರಿಬೊನ್ನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ನಡೆದಿದೆ.
ಬಣಕಾರ್ ನಾರಪ್ಪ (58) ಹಾಗೂ ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿಗಳು. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ತಹಸೀಲ್ದಾರ್ ಕವಿತಾ ಹಾಗೂ ಹಗರಿಬೊಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.