ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಅಗರ್ ಮಾಲ್ಯಾ ಜಿಲ್ಲೆಯಲ್ಲಿ 15 ವರ್ಷದ ಬಾಲಕನೊಬ್ಬ ಕ್ರಿಕೆಟ್ ಆಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಸುಸ್ಮರ್ನಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಾವಿನ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುವುದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತ ಮಖನ್ ಸಿಂಗ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು ನಂತರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿ ಳಿಸಿದ್ದಾರೆ.