ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಜೆ 4:30ರ ಸುಮಾರಿಗೆ ಪಶ್ಚಿಮಘಟ್ಟದ ತಪ್ಪಲಿನ ಹೆಬ್ರಿಯಲ್ಲಿ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.
ಇದರಿಂದ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ತುಂಬಿ ಹರಿದು ಮನೆ, ಕೃಷಿ ಜಮೀನುಗಳಿಗೆ ನೀರು ನುಗ್ಗಿ ತೀವ್ರ ಪ್ರವಾಹ ಉಂಟಾಗಿದೆ.
ಜತೆಗೆ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್’ಗಳು ಭಾರೀ ಮಳೆಗೆ ಕೊಚ್ಚಿ ಹೋಗಿವೆ. ಕಬ್ಬಿನಾಲೆ ಭಾಗದ ಪರ್ವತ ಶ್ರೇಣಿಯಲ್ಲಿ ಮೇಘಸ್ಫೋಟದಿಂದ ಈ ಭೀಕರ ಪ್ರವಾಹ ಉಂಟಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಚರಣೆ ಮುಂದುವರೆದಿದೆ.