ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಸ್ನಾನಕ್ಕೆ ತೆರಳಿದ್ದ ಹತ್ತು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರೋಹ್ತಾಸ್ ಜಿಲ್ಲೆಯ ತುಂಬಾ ಗ್ರಾಮದ ಸೋನೆ ನದಿಯಲ್ಲಿ ಮುಳುಗಿ ಆರು ಮಕ್ಕಳು ಮತ್ತು ಇತರ ನಾಲ್ಕು ಮಕ್ಕಳು ಕತಿಹಾರ್ ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣಾ ವ್ಯಾಪ್ತಿಯ ಸರಯ್ಯ ಧಾಲಾ ಬಳಿ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಬಿಹಾರ Cмо ತಿಳಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಎಲ್ಲಾ ಸಂತ್ರಸ್ತರಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ಹಣವನ್ನು ಘೋಷಿಸಿದ್ದಾರೆ.
“ಈ ಅಪಘಾತವು ತುಂಬಾ ದುಃಖಕರವಾಗಿದೆ ಮತ್ತು ಈ ಘಟನೆಯಿಂದ ಸಿಎಂ ತೀವ್ರವಾಗಿ ದುಃಖಿತರಾಗಿದ್ದಾರೆ. ಬಿಹಾರದಲ್ಲಿ ಸಾವನ್ನಪ್ಪಿದ ಮೃತರ ಕುಂಟುಬಗಳಿಗೆ ತಕ್ಷಣವೇ ನಾಲ್ಕು ಲಕ್ಷ ರೂಪಾಯಿಗಳ ಪರಿಹಾರ ಮೊತ್ತವನ್ನು ಒದಗಿಸಲು ಅವರು ಸೂಚಿಸಿದ್ದಾರೆ” ಎಂದು Cмо ಹೇಳಿದ್ದಾರೆ.