ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಿದ್ದರಿಂದ ಕೆಲವರಿಗೆ ಆತಂಕವಾಗಿದ್ದು, ಕೆಲವರು ಕಿಟಕಿಯಲ್ಲಿ ಚಿರತೆ ನೋಡಿ ಖುಷಿ ಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.
ಇತ್ತೀಚಿಗೆ ಆರಂಭವಾಗಿರುವ ಚಿರತೆ ಸಫಾರಿಯಲ್ಲಿ ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್‌ಗಳ ಮೇಲೆ ಹತ್ತುವ ವಾಡಿಕೆ ಮಾಡಿಕೊಂಡಿವೆ. ಅದೇ ರೀತಿ ಇಂದು ಸಹ ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಗುರ್ ಎಂದಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್‌ನಿಂದ ಕೆಳಕ್ಕೆ ಹಾರಿ ಹೋಗಿದೆ.