ಪೋಕ್ಸೋ ಕೇಸ್: ಜೈಲಿನಿಂದ ಹೊರಬಂದ ಚಿತ್ರದುರ್ಗದ ಮುರುಘಾಶ್ರೀ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಿಡುಗಡೆಯಾಗಿ ಜೈಲಿನಿಂದ ಹೊರಬಂದಿದ್ದಾರೆ.

ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶವನ್ನು ಹೊರಡಿಸಿತ್ತು. ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಸಾಕ್ಷಗಳ ವಿಚಾರಣೆ ಮುಗಿಯುವವರೆಗೂ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಕಳೆದ ಏಪ್ರಿಲ್ 23ರಂದು​ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕರೂ ಶ್ರೀಗಳು ಜೈಲಿಗೆ ಮತ್ತೆ ಹೋಗಬೇಕಾಗಿ ಬಂದಿತ್ತು.

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆ ಮಾಡಬೇಕಿತ್ತು. ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ್ದು ಪ್ರಕ್ರಿಯೆಗಳು ಮುಗಿದ ನಂತರ ಶ್ರೀಗಳು ಜೈಲಿನಿಂದ ಹೊರಬಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!