ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣ ವಿಧಾನಸಭೆಯ ಚುನಾವಣಾ ಫಲಿತಾಂಶ ರೋಚಕ ಹಂತ ತಲುಪಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಜಿದ್ದಾಜಿದ್ದಿನ ಹೋರಾಟ ಕಂಡು ಬಂದಿದ್ದು, ಮತದಾರನ ತೀರ್ಪು ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಅನ್ನು ಹಿಂದಿಕ್ಕಿರುವ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಚುನಾವಣಾ ಫಲಿತಾಂಶದಲ್ಲಿ ಹಾವ-ಏಣಿ ಆಟ ಇನ್ನೂ ಮುಂದುವರೆದಿದೆ.
90 ಸ್ಥಾನಕ್ಕೆ ನಡೆದಿರುವ ಚುನಾವಣೆಯಲ್ಲಿ 46 ಮ್ಯಾಜಿಕ್ ನಂಬರ್. ಸದ್ಯದ ಮತ ಎಣಿಕೆಯಲ್ಲಿ ಬಿಜೆಪಿಗೆ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಕೂಡ 35 ಕ್ಷೇತ್ರಗಳಲ್ಲಿ ಗೆಲುವಿಗಾಗಿ ಹೋರಾಡುತ್ತಿದ್ದಾರೆ. ಐಎನ್‌ಎಲ್‌ಡಿ ಮೂರು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಮತ ಎಣಿಕೆಯ ಪ್ರಾರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 45ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದರು. ಇದರಿಂದ ಹರಿಯಾಣದಲ್ಲಿ ಈ ಭಾರಿ ಕಾಂಗ್ರೆಸ್‌ಗೆ ಅಧಿಕಾರದ ಗದ್ದುಗೆ ಸಿಗುವ ಮುನ್ಸೂಚನೆ ಸಿಕ್ಕಿತ್ತು. ಆದರೆ ಈಗ ಕಾಂಗ್ರೆಸ್ ಲೆಕ್ಕಾಚಾರ ಸಂಪೂರ್ಣ ತಲೆ ಕೆಳಗಾಗಿದೆ. ಬಿಜೆಪಿ ಪಕ್ಷ ಮ್ಯಾಜಿಕ್ ನಂಬರ್ ತಲುಪಿದ್ರೆ ಹ್ಯಾಟ್ರಿಕ್ ಗೆಲುವು ಪಕ್ಕಾ ಅನ್ನೋ ಲೆಕ್ಕಾಚಾರದಲ್ಲಿದೆ.