ಒಮರ್ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಮುಂದಿನ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ.

ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್​ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ. ಎನ್‌ಸಿ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರು 1977 ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಅವರ ಮಗ ಫಾರೂಕ್ ಅಬ್ದುಲ್ಲಾ ಅವರು 1983, 1987 ಮತ್ತು 1996 ರಲ್ಲಿ ವಿಜಯಗಳಿಸಿದರು. ನಂತರ ಒಮರ್ ಅಬ್ದುಲ್ಲಾ ಅವರು 2008 ರಲ್ಲಿ ಕ್ಷೇತ್ರದಿಂದ ಆಯ್ಕೆಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!