ಹೊಸದಿಗಂತ ಡಿಜಿಟಲ್ ಡೆಸ್ಕ್:
ಔತಣಕೂಟದ ನೆಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಪ್ರಭಾವಿ ಸಚಿವರಾದ ಸತೀಶ್ ಜಾರಕಿಹೊಳಿ, ಪರಮೇಶ್ವರ್, ಮಹದೇವಪ್ಪ ನಿನ್ನೆ ಸಂಜೆ ಚಾಮರಾಜನಗರದ ಸುನೀಲ್ ಬೋಸ್ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದರು.
ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಮೂವರು ಅಹಿಂದ ನಾಯಕರು ಮಾಧ್ಯಮಗಳಿಗೆ ಹೇಳಿಕೆ ನೀಡಿದರೆ, ಮುಖ್ಯಮಂತ್ರಿ ವಿಚಾರವಾಗಿಯೇ ಸಭೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಿದ್ದರಾಮಯ್ಯನವರನ್ನು ಕೆಳಗಿಳಿಸಿದರೆ ಈ ಮೂವರಲ್ಲಿ ಒಬ್ಬರು ಸಿಎಂ ಆಗುವ ಸಾಧ್ಯತೆ ಹೆಚ್ಚಿದೆ. ಯಾರಿಗೆ ಅವಕಾಶ ಬಂದರೂ ಒಗ್ಗಟ್ಟಾಗಿರೋಣ.
ಸಿದ್ದರಾಮಯ್ಯ ಇಳಿಸುವ ಪ್ರಯತ್ನಕ್ಕೆ ಯಾರೇ ಕೈ ಹಾಕಿದರೂ ನಾವು ಮೂವರು ತಡೆಯಬೇಕು. ಅನಿವಾರ್ಯವಾಗಿ ಸಿದ್ದರಾಮಯ್ಯ ಇಳಿಯುವ ಸಂದರ್ಭ ಬಂದರೇ ನಾವು ಒಟ್ಟಾಗಿ ಸಿಎಂ ಸ್ಥಾನಕ್ಕಾಗಿ ಪ್ರಯತ್ನಿಸಬೇಕು.
2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಅವಿರೋಧ ಮತಗಳಿಂದ ಅನೇಕ ಸ್ಥಾನಗಳನ್ನು ಗೆದ್ದುಕೊಂಡಿತು. ಅದೇ ಕಾರ್ಡ್ ಹೈಕಮಾಂಡ್ ಮುಂದೆ ಪ್ಲೇ ಮಾಡಬೇಕು. ಯಾರ ಪರ ಅಥವಾ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಬೇಡಿ. ಎಚ್ಚರಿಕೆಯಿಂದ ಮುಂದುವರಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.