ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ.
ಮುಡಾ ಹಗರಣ ಸೇರಿದಂತೆ ಹಲವು ವಿಚಾರವಾಗಿ ರಾಜ್ಯಪಾಲರು ಹಲವು ಬಾರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ವರದಿ ಕೇಳಿದ್ದರು. ಅಲ್ಲದೆ ಕಾಂಗ್ರೆಸ್ ನಾಯಕರು ಕೂಡ ರಾಜ್ಯಪಾಲರ ಈ ಒಂದು ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಮತ್ತೆ ಭೇಟಿ ಮಾಡಿದ್ದಾರೆ.