ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ ಮತ್ತು ಹಿಂದುಗಳನ್ನು ವಿಭಜಿಸಲು, ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ದ್ವೇಷವನ್ನು ಹರಡುವ ಕಾರ್ಖಾನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಇಂದು ವರ್ಚುವಲ್ ಮೂಲಕ ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ. ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ನಂತರ ಮಾತನಾಡಿದ ಮೋದಿ, ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಮತ್ತು ಇದು ದೇಶದ ಮನಸ್ಥಿತಿಯನ್ನು ತೋರಿಸುತ್ತದೆ. ಈ ರೀತಿ ಮಹಾರಾಷ್ಟ್ರದಲ್ಲಿ ನಾವು ದೊಡ್ಡ ಗೆಲುವು ಪಡೆಯಬೇಕು ಎಂದು ಹೇಳಿದರು.
ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(MVA) ಅಧಿಕಾರ ಪಡೆಯಲು ಮಹಾರಾಷ್ಟ್ರವನ್ನು ದುರ್ಬಲಗೊಳಿಸಲು ಬಯಸಿದೆ. ಆದರೆ ಆಡಳಿತಾರೂಢ ಮಹಾಯುತಿಯು ರಾಜ್ಯವನ್ನು ಬಲಪಡಿಸುತ್ತದೆ ಎಂದರು.
ಕಾಂಗ್ರೆಸ್ ಒಂದು ಬೇಜವಾಬ್ದಾರಿ ಪಕ್ಷ ಮತ್ತು ದ್ವೇಷವನ್ನು ಹರಡುವ ಕಾರ್ಖಾನೆಯಾಗಿದೆ. ಕಾಂಗ್ರೆಸ್ ಗೆ ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಕಾಳಜಿಯಿಲ್ಲ. ನಾವು ಎರಡರ ಬಗ್ಗೆಯೂ ಗಮನ ಹರಿಸಿದ್ದೇವೆ ಎಂದು ಹೇಳಿದರು.
ಬಡವರು, ರೈತರು, ಯುವಕರು ಮತ್ತು ಮಹಿಳೆಯರ ಅಭಿವೃದ್ಧಿಯೊಂದಿಗೆ ವಿಕ್ಷಿತ್ ಭಾರತ್ ನಮ್ಮ ಗುರಿಯಾಗಿದೆ ಎಂದು ಪ್ರಧಾನಿ ಹೇಳಿದರು.