ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಿತೀಶ್ ರೆಡ್ಡಿ ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಬಾಂಗ್ಲಾದೇಶ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ 221ರನ್ ಬೃಹತ್ ಮೊತ್ತ ಪೇರಿಸಿದ್ದು, ಬಾಂಗ್ಲಾದೇಶಕ್ಕೆ ಗೆಲ್ಲಲು 222 ರನ್ ಬೃಹತ್ ಗುರಿ ನೀಡಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ಭಾರತ ತಂಡ ನಿಗದಿತ 20 ಓವರ್ ನಲ್ಲಿ ನಿತೀಶ್ ರೆಡ್ಡಿ (74 ರನ್) ಮತ್ತು ರಿಂಕು ಸಿಂಗ್ (53 ರನ್) ಸ್ಫೋಟಕ ಅರ್ಧಶತಕಗಳ ನೆರವಿನಿಂದ 221ರನ್ ಬೃಹತ್ ಮೊತ್ತ ಪೇರಿಸಿದೆ.
ಆರಂಭಿಕ ಆಘಾತದ ಹೊರತಾಗಿಯೂ ಭಾರತ ತಂಡ ನಿತೀಶ್ ರೆಡ್ಡಿ ಮತ್ತು ರಿಂಕು ಸಿಂಗ್ ರ ಅಮೋಘ ಬ್ಯಾಟಿಂಗ್ ನೆರವಿನಿಂದ ಬಾಂಗ್ಲಾದೇಶಕ್ಕೆ ಗೆಲ್ಲಲು 222ರನ್ ಗಳ ಬೃಹತ್ ಗುರಿ ನೀಡಿದೆ.