ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವ ಸುರ್ಜೇವಾಲಾ ಅವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿರುವುದು ಕಂಡು ಬಂದರೆ ಸಚಿವ ಸ್ಥಾನದಿಂದ ವಜಾಗೊಳಿಸಲು ಸೂಚನೆ ನೀಡಿದ್ದಾರೆ ಎಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡಿದರು. ನನ್ನ ಮತ್ತು ಶಿವಕುಮಾರ್ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು, ಮಾಡಬಾರದು. ಮುಂದೆ ಇಂತಹ ಪರಿಸ್ಥಿತಿ ಬಂದರೆ ನೀವೇ ಹೊಣೆಯಾಗುತ್ತೀರಿ ಎಂದು ಸಿಎಂ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.