ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದಾರೆ.
ದೆಹಲಿ ಲೋಧಿ ರಸ್ತೆಯಲ್ಲಿರುವ ಸಿಬಿಐ ಪ್ರಧಾನ ಕಚೇರಿಗೆ ವಿಜಯ್ ಅವರು ಕಾರಿನಲ್ಲಿ ಆಗಮಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ತನಿಖಾ ಸಂಸ್ಥೆಯ ಭ್ರಷ್ಟಾಚಾರ ನಿಗ್ರಹ ಘಟಕದ ಉಪ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಮಂಗಳವಾರ ಮತ್ತೆ ಹಾಜರಾಗುವಂತೆ ಅವರಿಗೆ ಸೂಚಿಸಿದ್ದು, ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


