ದಸರಾ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಸಾಥ್: 2000 ಹೆಚ್ಚುವರಿ ಬಸ್ ವ್ಯವಸ್ಥೆ!

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.

ಅ.11 ರಂದು ಆಯುಧ ಪೂಜೆ, ಅ.12 ರಂದು ವಿಜಯದಶಮಿ ಹಾಗೂ ಎರಡನೇ ಶನಿವಾರ, ಅ.13 ರಂದು ಭಾನುವಾರ. ಹೀಗಾಗಿ ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಜನಜಂಗುಳಿಯಿಂದ ಕೂಡಿದೆ.

ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವತಿಯಿಂದ 2000ಕ್ಕೂ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸಲಿದ್ದು, ಅ.9 ರಿಂದ 12ರವರಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತ್ ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.13 ಹಾಗೂ 14 ರಂದು ಬಸ್‌ಗಳು ಕಾರ್ಯನಿರ್ವಹಿಸಲಿವೆ.

ಮೈಸೂರು ದಸರಾ ಜಂಬೂಸವಾರಿ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ಪ್ರತ್ಯೇಕವಾಗಿ 660 ದಸರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಕಾರ್ಯಾನಿರ್ವಹಿಸಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!