ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯಸ್ಸಾದ ಮೇಲೆ ತಂದೆ-ತಾಯಿಯನ್ನು ತಮ್ಮ ಮಕ್ಕಳಂತೆ ಕಾಣಬೇಕಿರುವ ಮಕ್ಕಳೇ ಕಿರುಕುಳ ನೀಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಕ್ಕಳ ಕಿರುಕುಳದಿಂದ ಬೇಸತ್ತು ತಂದೆ-ತಾಯಿ ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
70 ವರ್ಷದ ವ್ಯಕ್ತಿ ಮತ್ತು ಅವರ ಪತ್ನಿ ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜಸ್ಥಾನದ ನಾಗೌರ್‌ನಲ್ಲಿ ಗುರುವಾರ ಈ ಘಟನೆ ನಡೆದಿದೆ. ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಅವರ ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದ್ದು, ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಎರಡು ದಿನಗಳಿಂದ ದಂಪತಿ ಕಾಣದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ದಂಪತಿಯ ಮಗನಿಗೆ ಮಾಹಿತಿ ನೀಡಿದ್ದಾರೆ. ನಂತರ ಮಗ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟ್ಯಾಂಕ್‌ನ ಮುಚ್ಚಳ ತೆರೆದಿದ್ದು, ದಂಪತಿಯ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ.