ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಕಾರ್ಯಕರ್ತೆ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಜತೆಗೆ, ಸಂತ್ರಸ್ತೆ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿರುವ ಪ್ರಕರಣವನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಶಾಸಕ ವಿನಯ್ ಕುಲಕರ್ಣಿ ವಿರುದ್ಧ ರೈತ ಮಹಿಳೆ ದೂರು ನೀಡಿದ್ದರು. ವಿನಯ್ ಕುಲಕರ್ಣಿ ವಿರುದ್ಧ ಜೀವ ಬೆದರಿಕೆ, ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನಲ್ಲಿ ವಿನಯ್ ಕುಲಕರ್ಣಿ ಅತ್ಯಾಚಾರವೆಸಗಿದ್ದರೆಂದು ಹಾವೇರಿಯ ಮಹಿಳೆ ಸಂಜಯ್ ನಗರ ಠಾಣೆಗೆ ದೂರು ನೀಡಿದ್ದರು. ಸಂತ್ರಸ್ತ ಮಹಿಳೆ ದೂರಿಗೆ ಪ್ರತಿದೂರು ದಾಲಿಸಿದ್ದ ವಿನಯ್ ಕುಲಕರ್ಣಿ, 2 ಕೋಟಿ ರೂಪಾಯಿ ನೀಡುವಂತೆ ರೈತ ಮಹಿಳೆ ಬ್ಲ್ಯಾಕ್‌ಮೇಲ್ ಮಾಡಿದ್ದರು ಎಂದು ಆರೋಪಿಸಿದ್ದರು. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂತ್ರಸ್ಥೆಯೂ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 9 ರಂದು ದೂರು ನೀಡಿದ್ದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತೆಯ ಪ್ರಾಥಮಿಕ ಹೇಳಿಕೆಗಳ ಸಂಗ್ರಹ ಸೇರಿದಂತೆ ಸ್ಥಳ ಮಹಜರು ನಡೆಸಲಾಗಿದೆ. ರಾಜ್ಯ ಸರ್ಕಾರವು ಶುಕ್ರವಾರ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿದೆ.