January19, 2026
Monday, January 19, 2026
spot_img

ಕರಾಚಿಯ ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ ಅವಘಡ: 14 ಮಂದಿ ಸಾವು, 60 ಕ್ಕೂ ಹೆಚ್ಚು ಜನ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಕರಾಚಿಯ ಗುಲ್ ಪ್ಲಾಜಾ ಶಾಪಿಂಗ್‌ ಮಾಲ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 60 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಫುಲ್ಬಾಲ್‌ ಮೈದಾನಕ್ಕಿಂತಲೂ ಹೆಚ್ಚಿನ ವಿಸ್ತೀರ್ಣ ಹೊಂದಿರುವ ಮಾಲ್‌ನ ಬಹುತೇಕ ಭಾಗಗಳು ಸುಟ್ಟುಹೋಗಿದೆ. ಹೀಗಾಗಿ ಕಟ್ಟಡ ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ರಕ್ಷಣೆಗೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಕಳೆದ 33 ಗಂಟೆಗಳಿಂದ ಕಾರ್ಯಾಚರಣೆ ನಡೆಸುತ್ತಿದೆ. ದುರಂತದಲ್ಲಿ 60ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದು, ಸುಮಾರು 70 ಜನ ಕಟ್ಟಡದಲ್ಲೇ ಸಿಲುಕಿದ್ದಾರೆ. ಶಾಪಿಂಗ್‌ ಮಾಲ್‌ನ ಮತ್ತೊಂದು ಬದಿಯು ಬೆಂಕಿಯ ಕೆನ್ನಾಲಿಗೆಗೆ ಸುಟ್ಟುಹೋಗಿದ್ದು, ಯಾವುದೇ ಕ್ಷಣದಲ್ಲೂ ಕುಸಿಯುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

Must Read