ನಾಗಪುರದಲ್ಲಿ ವಿಜಯದಶಮಿ ಉತ್ಸವ.. ‘ಶಸ್ತ್ರ ಪೂಜೆ’ ನೆರವೇರಿಸಿದ ಸರಸಂಘ ಚಾಲಕ ಭಾಗವತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

RSS ಸರಸಂಘ ಚಾಲಕ ಮೋಹನ್ ಭಾಗವತ್ ಅವರು ವಿಜಯದಶಮಿ ನಿಮಿತ್ತ ನಾಗಪುರದ ಆರ್‌ಎಸ್‌ಎಸ್ ಕೇಂದ್ರ ಕಚೇರಿಯಲ್ಲಿ ಶನಿವಾರ ‘ಶಸ್ತ್ರ ಪೂಜೆ’ ನೆರವೇರಿಸಿದರು.

ಸಮಾರಂಭದ ಮುಖ್ಯ ಅತಿಥಿಯಾಗಿರುವ ಪದ್ಮಭೂಷಣ ಮತ್ತು ಮಾಜಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಕೆ. ರಾಧಾಕೃಷ್ಣನ್ ಅವರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇಸ್ರೋ ಮಾಜಿ ಮುಖ್ಯಸ್ಥ ಕೆ ಶಿವನ್ ಉಪಸ್ಥಿತರಿದ್ದರು.

ವಿಜಯದಶಮಿ ಆಚರಿಸಲು ಸೇರಿದ್ದ ಆರ್‌ಎಸ್‌ಎಸ್‌ ಸದಸ್ಯರು ‘ಸಂಘ ಪ್ರಾರ್ಥನಾ’ ಪಠಿಸುತ್ತಿದ್ದ ದೃಶ್ಯವೂ ಕಂಡುಬಂತು. ಹಿಂದಿನ ವರ್ಷಗಳಲ್ಲಿ, ವಿಜಯದಶಮಿ ಕಾರ್ಯಕ್ರಮವು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಎಚ್‌ಸಿಎಲ್ ಮುಖ್ಯಸ್ಥ ಶಿವ ನಾಡರ್ ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳ ಉಪಸ್ಥಿತಿಗೆ ಸಾಕ್ಷಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!