ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ಮೆರವಣಿಗೆಗೂ ಮುನ್ನ ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದ್ದಾರೆ.
ಮಧ್ಯಾಹ್ನ 1:41 ರಿಂದ 2:10ರ ವರೆಗೆ ಸಲ್ಲುವ ಮಕರ ಶುಭಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು. ಆ ಮೂಲಕ ದಸರಾ ಮೆರವಣಿಗೆಗೆ ಅಧಿಕೃತ ಚಾಲನೆ ನೀಡಲಾಗಿದೆ.
ನಂದಿಧ್ವಜ ಪೂಜೆ ಆದ ಬಳಿಕ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುಗೆ ಅಂಬಾರಿ ಕಟ್ಟುವ ಕಾರ್ಯ ನಡೆಯುತ್ತಿದೆ. ನಂತರ ಮೆರವಣಿಗೆಗೆ ಪುಷ್ಪಾರ್ಚನೆ ಮಾಡಿ ಸಿಎಂ ಚಾಲನೆ ನೀಡಲಿದ್ದಾರೆ.