ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶ ವಿರುದ್ದದ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆಲ್ಲುವ ಮೂಲಕ ಭಾರತ ಪ್ರವಾಸವನ್ನು ಕೊನೆಗೊಳಿಸುವ ಇರಾದೆಯಲ್ಲಿ ಬಾಂಗ್ಲಾದೇಶ ತಂಡವಿದೆ.
ಭಾರತ ತಂಡದಲ್ಲಿ 1 ಬದಲಾವಣೆಯಾಗಿದ್ದರೆ, ಬಾಂಗ್ಲಾ ತಂಡದಲ್ಲಿ 2 ಬದಲಾವಣೆಗಳಾಗಿವೆ.
ಉಭಯ ತಂಡಗಳು
ಬಾಂಗ್ಲಾದೇಶ ತಂಡ: ಪರ್ವೇಜ್ ಹೊಸೈನ್ ಎಮನ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಂಜೀದ್ ಹಸನ್, ತೌಹೀದ್ ಹೃದಯೋಯ್, ಮಹ್ಮುದುಲ್ಲಾ, ಮಹೇದಿ ಹಸನ್, ತಸ್ಕಿನ್ ಅಹ್ಮದ್, ರಿಶಾದ್ ಹೊಸೈನ್, ಮುಸ್ತಫಿಜುರ್ ರಹಮಾನ್, ತೈಜುರ್ ರಹಮಾನ್. ಸಾಕಿಬ್
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ನಿತೀಶ್ ರೆಡ್ಡಿ, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಮಯಾಂಕ್ ಯಾದವ್.