ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, “ಬಾಬಾ ಸಿದ್ದಿಕ್ ಅವರ ದುರಂತ ಸಾವು ಆಘಾತಕಾರಿ ಮತ್ತು ದುಃಖಕರವಾಗಿದೆ. ಈ ಕಷ್ಟದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬದೊಂದಿಗೆ ಇವೆ. ಈ ಭಯಾನಕ ಘಟನೆಯು ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಕುಸಿತವನ್ನು ಬಹಿರಂಗಪಡಿಸುತ್ತದೆ. ಮಹಾರಾಷ್ಟ್ರ ಸರ್ಕಾರವು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ನ್ಯಾಯವು ಮೇಲುಗೈ ಸಾಧಿಸಬೇಕು” ಎಂದು ಹೇಳಿದ್ದಾರೆ.