ಸಿಎಂ ಸವದತ್ತಿಗೆ ತೆರಳುವ ವೇಳೆ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

ಹೊಸದಿಗಂತ ಹುಬ್ಬಳ್ಳಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸವದತ್ತಿಗೆ ತೆರಳುವಾಗ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ನಗರದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತರಾದ ಜಗದೀಶ್ ಕಂಬಳಿ, ಮಂಜುನಾಥ್ ಕಲಾಲ ಕಪ್ಪು ಬಟ್ಟೆ ಪ್ರದರ್ಶಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ತೆರಳುವಾಗ ಗೋಕುಲ ರಸ್ತೆ ಅಕ್ಷಯ ಪಾಕ್೯ ವೃತ್ತದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು. ಪೊಲೀಸ್ ಇಲಾಖೆಯ ಭದ್ರತಾ ವಿಫಲತೆಯಾಗಿದೆ.

ಇದಕ್ಕೂ ಮೊದಲು ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯಬಾರದು ಎಂದು ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿತ್ತು. ಪೊಲೀಸರು ನಾಯಕರು ಸೇರಿದಂತೆ ಕಾರ್ಯಕರ್ತರ ವಶಕ್ಕೆ ಪಡೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!