ಹೊಸದಿಗಂತ ಡಿಜಿಟಲ್ ಡೆಸ್ಕ್;
ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮತ್ತು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಇಬ್ಬರು ಶಂಕಿತ ಆರೋಪಿಗಳನ್ನು ಇಂದು ಮುಂಬೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಒಬ್ಬ ಶಂಕಿತ ಗುರ್ಮೈಲ್ ಸಿಂಗ್ ನನ್ನು ಅಕ್ಟೋಬರ್ 21ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದರೆ.
ಇನ್ನೊಬ್ಬ ಆರೋಪಿ ಧರ್ಮರಾಜ್ ಕಶ್ಯಪ್ ನನ್ನು ವಯಸ್ಸನ್ನು ನಿರ್ಧರಿಸಲು ಆಸಿಫಿಕೇಶನ್ ಪರೀಕ್ಷೆಯ ನಂತರ ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ನಿರ್ದೇಶಿಸಿತು.