ಹೊಸದಿಗಂತ ಡಿಜಿಟಲ್ ಡೆಸ್ಕ್;
ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಿಂದ ಈ ಎರಡು ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ.
ಹರಿಯಾಣ ರಾಜ್ಯದ ವೀಕ್ಷಕರಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಬಿಜೆಪಿ ನೇಮಕ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ವೀಕ್ಷಕರಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಬಿಜೆಪಿ ನೇಮಕ ಮಾಡಿದೆ.