ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಯಾವುದೇ ಪ್ರಕರಣವನ್ನು ಕಣ್ಮುಚ್ಚಿ ವಜಾ ಮಾಡುವಂತಿಲ್ಲ. ನಿಯಮಾನುಸಾರ ವಾಪಸ್ ಪಡೆಯುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಳ್ಳು ಪ್ರಕರಣಗಳನ್ನು ದಾಖಲಿಸಿದರೆ ಅದನ್ನು ವಜಾಗೊಳಿಸುವ ಮತ್ತು ಹಿಂಪಡೆಯುವ ಹಕ್ಕು ಸರ್ಕಾರಕ್ಕೆ ಇದೆ. ಯಾರೋ ಹೇಳಿದಂತೆ ಪ್ರಕರಣವನ್ನು ಹಿಂಪಡೆಯಲು ಸಾಧ್ಯವಿಲ್ಲ.
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಅಲ್ಪಸಂಖ್ಯಾತರು ಮಾತ್ರವಲ್ಲ, ವಿದ್ಯಾರ್ಥಿಗಳು ಮತ್ತು ರೈತರೂ ಇದ್ದಾರೆ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣಗಳನ್ನೂ ನೋಡುತ್ತೇವೆ. ಯಾವುದೇ ಪ್ರಕರಣವನ್ನು ಕಣ್ಮುಚ್ಚಿ ತೆಗೆದುಕೊಳ್ಳುವುದಿಲ್ಲ, ಆದರೆ ನಿಯಮಾನುಸಾರ ತೆಗೆದುಕೊಳ್ಳುತ್ತೇವೆ ಎಂದರು.