ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅವರು ಅನಾರೋಗ್ಯದ ಕಾರಣ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಠಾಕ್ರೆ ಅವರ ಹೃದಯದ ಪರಿಧಮನಿಗಳಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಉದ್ಧವ್ ಆಂಜಿಯೋಗ್ರಫಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.