ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಬೈಜು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೌಡಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ ತಡರಾತ್ರಿ ನಟ ಬೈಜು ಸಂತೋಷ್ ಓಡಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ.ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನಟನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಬೈಜು ಸಂತೋಷ್ ಅವರನ್ನು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.