ನಾನು ಬೌದ್ಧ ಧರ್ಮ ಸ್ವೀಕರಿಸುವೆ: ಸಚಿವ ಹೆಚ್.ಸಿ.ಮಹದೇವಪ್ಪ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಿಂದು ದರ್ಮದಲ್ಲಿನ ಜಾತೀಯತೆ ಬಗ್ಗೆ ಬೇಸರ ವ್ಯಕ್ತಪಡಿಸಿ ತಾನು ಬೌದ್ಧ ಧರ್ಮ ಸ್ವೀಕಾರ ಮಾಡುತ್ತಿರುವುದಾಗಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಘೋಷಿಸಿದ್ದಾರೆ.

ಇಂದು ಧಮ್ಮ ಚಕ್ರ ಪರಿವರ್ತನಾ ದಿನದ ಹಿನ್ನೆಲೆಯಲ್ಲಿ ಶುಭ ಕೋರಿರುವ ಸಚಿವ ಮಹದೇವಪ್ಪ, ಹಿಂದು ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ.ಹೀಗಾಗಿ ಹಿಂದು ದರ್ಮ ಸುಧಾರಣೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದಿದ್ದಾರೆ.ವ್ಯಕ್ತಿಯ ಬೆಳವಣಿಗೆಗೆ, ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆ ರೋಗದಿಂದ ಬಳಲುತ್ತಿರುವ ಹಿಂದು ಧರ್ಮ ಸುಧಾರಣೆ ಆಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ. ಹಾಗೂ ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕು ಎಂದು ಬಯಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!