ಕೆನಡಾದಿಂದ ಭಾರತೀಯ ರಾಯಭಾರಿಯನ್ನು ವಾಪಾಸ್‌ ಕರೆಸಿಕೊಂಡ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತೆ ಉಲ್ಬಣಗೊಂಡಿದ್ದು, ಭಾರತವು ಒಟ್ಟಾವಾದಲ್ಲಿನ ತನ್ನ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಮತ್ತು ಇತರ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ವಾಪಾಸ್‌ ಕರೆಸಿಕೊಳ್ಳುವ ನಿರ್ಧಾರ ಮಾಡಿದೆ.

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ತನಿಖೆಯಲ್ಲಿ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರ ವಿರುದ್ಧ ಕೆನಡಾ ‘ಆಸಕ್ತ ವ್ಯಕ್ತಿಗಳು’ ಎಂದು ಆರೋಪಿಸಿದ್ದು, ಇವರ ವಿರುದ್ಧ ಕೇಸ್‌ ಹಾಕಲು ಅನುಮತಿ ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ.
ಇದಕ್ಕೂ ಮುನ್ನ, ಕೆನಡಾದ ಚಾರ್ಜ್ ಡಿ’ಅಫೇರ್ಸ್ ಅನ್ನು ಸೋಮವಾರ ಸಂಜೆ ವಿದೇಶಾಂಗ ವ್ಯವಹಾರಗಳ ಇಲಾಖೆಯ ಕಚೇರಿಗೆ ಬರಲು ಸಮನ್ಸ್‌ ನೀಡಲಾಗಿತ್ತು. ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರು ಮತ್ತು ಅಧಿಕಾರಿಗಳ ಮೇಲೆ ಆಧಾರರಹಿತವಾಗಿ ಟಾರ್ಗೆಟ್‌ ಮಾಡಲಾಗುತ್ತಿದೆ. ಇದನ್ನು ಭಾರತ ಎಂದಿಗೂ ಸ್ವೀಕಾರ ಮಾಡೋದಿಲ್ಲ ಎಂದು ಅವರಿಗೆ ತಿಳಿಸಲಾಗಿದೆ.

ಉಗ್ರವಾದ ಮತ್ತು ಹಿಂಸಾಚಾರದ ವಾತಾವರಣದಲ್ಲಿ, ಟ್ರೂಡೊ ಸರ್ಕಾರದ ಕ್ರಮಗಳು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡಿದೆ ಎಂದು ತಿಳಿಸಲಾಗಿದೆ. ಅವರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರಸ್ತುತ ಕೆನಡಾ ಸರ್ಕಾರದ ಬದ್ಧತೆಯ ಬಗ್ಗೆ ನಮಗೆ ನಂಬಿಕೆಯಿಲ್ಲ. ಆದ್ದರಿಂದ, ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ಹಿಂತೆಗೆದುಕೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!