ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿ ಸಿ ಹೆಚ್ ನ್ಯಾಯಾಲಯವು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ನಟ ದರ್ಶನ್ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಹಾಗೂ ಪೊಲೀಸರ ಎಸ್ ಪಿ ಪಿ ಪರ ವಕೀಲರ ವಾದ ಮತ್ತು ಪ್ರತಿ ವಾದಗಳನ್ನು ಆಲಿಸಿದ ಬಳಿಕ ಜಾಮೀನು ಅರ್ಜಿಯನ್ನು ವಜಾಗೊಳಿಸಿತು.
ಈ ಹಿನ್ನೆಲ ಇಂದು ನಟ ದರ್ಶನ್ ಪರ ವಕೀಲ ಸುನಿಲ್ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.