14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ: ಮೂವರು ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್ನಲ್ಲಿರುವ 14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ನ 4ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!