ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದೆಲ್ಲೆಡೆ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದ್ದು ಇಂದು ನಗರದ ಶಾಸಕರ ಭವನದಲ್ಲಿ ವಾಲ್ಮೀಕಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದ್ದಾರೆ .
ನಗರದಲ್ಲಿ ನಡೆದ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಸಚಿವ ರಾಜಣ್ಣ, ಶಾಸಕ ದದ್ದಲ್, ಸಮುದಾಯದ ಸ್ವಾಮೀಜಿ ಸೇರಿ ಹಲವರು ಉಪಸ್ಥಿತರಿದ್ದರು.
ಪಾದಯಾತ್ರೆ ಮೂಲಕ ಬ್ಯಾಂಕ್ವೆಟ್ ಹಾಲ್ ಕಾರ್ಯಕ್ರಮಕ್ಕೆ ತೆರಳಿದ ಸಿಎಂಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ವಿವಿಧ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯ, ನಂತರ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದರು.