ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಮಾತನಾಡಿ, ಸದ್ಯದಲ್ಲೇ ಹಾಲಿನ ದರವನ್ನು ಲೀಟರ್ ಗೆ 5 ರೂ.ಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಹಾಲಿನ ದರವನ್ನು ಲೀಟರ್ಗೆ 5 ರೂಪಾಯಿ ಹೆಚ್ಚಿಸುವಂತೆ ರೈತರು ಒತ್ತಾಯಿಸುತ್ತಿದ್ದಾರೆ. ಅದರಂತೆ ಸದ್ಯದಲ್ಲಿಯೇ ಹಾಲಿನ ದರ ಲೀಟರ್ ಗೆ 5 ರೂ. ಏರಿಕೆ ಮಾಡಲಾಗುತ್ತದೆ ಎಂದಿದ್ದಾರೆ.
ಹಾಲು ಉತ್ಪಾದಕರಿಗೆ ಹೆಚ್ಚಳವಾದ ಸಂಪೂರ್ಣ5 ರೂಪಾಯಿ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಟಕೇಶ್ ಸ್ಪಷ್ಟಪಡಿಸಿದ್ದಾರೆ.