ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲ್ಲೂಕಿನ ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ನಡೆದಿದೆ.
ಕಾಡಾನೆಗೆ ಅಂದಾಜು 25 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಆನೆ ಆಹಾರ ಅರಸಿ ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ಬಂದಿದೆ. ಈ ವೇಳೆ ಅಲ್ಲೇ ಹಾದು ಹೋಗಿರುವ ವಿದ್ಯುತ್ ತಂತಿ ಆನೆಗೆ ತಾಕಿದ್ದು, ಸ್ಥಳದಲ್ಲೇ ಸಾವನ್ನಪ್ಪಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.